×
Ad

3 ಜೈಶೆ ಮುಹಮ್ಮದ್ ಭಯೋತ್ಪಾದಕರಿಗೆ ಜೈಲು

Update: 2019-06-01 22:28 IST

ಇಸ್ಲಾಮಾಬಾದ್, ಜೂ. 1: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶೆ ಮುಹಮ್ಮದ್‌ಗಾಗಿ ನಿಧಿ ಸಂಗ್ರಹಿಸಿದ ಪ್ರಕರಣದಲ್ಲಿ ಅದರ ಮೂವರು ಕಾರ್ಯಕರ್ತರಿಗೆ ಆ ದೇಶದ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವೊಂದು ಶುಕ್ರವಾರ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಸಂಘಟನೆಗಾಗಿ ಸಂಗ್ರಹಿಸಿದ ಹಣವನ್ನು ಆ ಮೂವರಿಂದ ವಶಪಡಿಸಿಕೊಳ್ಳಲಾಗಿತ್ತು. ಮೂರು ಪ್ರತ್ಯೇಕ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಮೂವರನ್ನೂ ದೋಷಿ ಎಂಬುದಾಗಿ ತೀರ್ಮಾನಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News