×
Ad

ಹರಪನಹಳ್ಳಿ: ಹಾವು ಕಡಿದು ರೈತ ಸಾವು

Update: 2019-06-01 22:56 IST

ಹರಪನಹಳ್ಳಿ: ಹಾವು ಕಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಗರಿಗುಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದಲಿಂಗಪ್ಪ (23) ಸಾವನ್ನಪ್ಪಿದ ರೈತ. ಬೆಳಗಿನ ಜಾವ ಜಮೀನಿಗೆ ನೀರು ಹಾಯಿಸಲು ಹೋದಾಗ ಈ ಘಟನೆ ಜರುಗಿದೆ. ಕೂಡಲೇ ಸಿದ್ದಲಿಂಗಪ್ಪ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಕುರಿತು ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News