ಮನುಷ್ಯ-ಮನುಷ್ಯನ ನಡುವೆ ಪ್ರೀತಿ, ವಿಶ್ವಾಸ ಬೆಳೆಸುವ ಕೆಲಸವಾಗಬೇಕು: ರಮಾನಾಥ ರೈ
ಬಂಟ್ವಾಳ, ಜೂ. 2: ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಿ.ಸಿ.ರೋಡಿನ ತಲಪಾಡಿ ಆಲ್-ಖಜಾನ ಹಾಲ್‍ನಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡಿ, ಸಾಮರಸ್ಯದ ಬದುಕು ನಡೆಸಿ, ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಗಳಿಸಿ, ದ್ವೇಷದಿಂದ ಬದುಕುವುದನ್ನು ಯಾರು ಸಹಿಸುದಿಲ್ಲ, ಎಲ್ಲರೂ ಒಟ್ಟಾಗಿ ಸಹಬಾಳ್ವೆ ನಡೆಸಿದಾಗ ಮಾತ್ರ ದೇವರು ಒಳ್ಳೆಯದು ಮಾಡುತ್ತಾರೆ ಎಂದು ಹೇಳಿದರು.
ಮಿತ್ತಬೈಲು ಇರ್ಷಾದ್ ದಾರಿಮಿ ಶುಭ ಹಾರೈಸಿದರು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭ ತುಳು ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಜಿಪಂ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಜೆಡಿಎಸ್ ಮುಖಂಡ ಮಹಮ್ಮದ್ ಶಫಿ, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಆಲಿ, ಗಣೇಶ್, ನವೀನ್ ಡಿಸೋಜ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಮಾಯಿಲಪ್ಪ ಸಾಲಿಯಾನ್, ಹೇಮನಾಥ ಶೆಟ್ಟಿ ಪುರಸಭೆ ಸದಸ್ಯರು, ತಾಪಂ ಸದಸ್ಯರು ಉಪಸ್ಥಿತರಿದ್ದರು.