ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ: ಅಗತ್ಯ ಇರುವ ಹಣಕಾಸು ವರದಿ ಕೋರಿದ ಆಂಧ್ರ ಸಿಎಂ

Update: 2019-06-02 17:58 GMT

ವಿಜಯವಾಡ, ಜೂ. 2: ಹದಿನೈದನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ‘ಆಂಧ್ರಪ್ರದೇಶದ ವಿಶೇಷ ಸ್ಥಾನಮಾನ ನೀಡುವ ಅಗತ್ಯವನ್ನು ಒತ್ತಿ ಹೇಳುವ’ ರಾಜ್ಯದ ಹಣಕಾಸು ಸ್ಥಿತಿಗತಿಯ ವರದಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

 ಪ್ರಸಕ್ತ ಹಣಕಾಸು ಸ್ಥಿತಿಗತಿ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ರಾಜ್ಯಕ್ಕೆ ವಿಶೇಷ ಸ್ಥಾನಮಾನದ ಅಗತ್ಯ ಯಾಕೆ ? ಎಂಬ ಬಗ್ಗೆ ಅಧಿಕಾರಿಗಳು ವಿವರಣೆ ನೀಡಬೇಕು ಎಂದು ಹಣಕಾಸು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪುನರ್ ಪರಿಶೀಲನಾ ಸಭೆಯಲ್ಲಿ ರೆಡ್ಡಿ ಹೇಳಿದ್ದಾರೆ.

 ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡಬೇಕು ಎಂಬುದು ಬಹು ಕಾಲದ ಹಿಂದಿನಿಂದಲೂ ಇರುವ ಬೇಡಿಕೆ. ಆದರೆ, ಕೇಂದ್ರ ಈ ಬೇಡಿಕೆಯನ್ನು ಇದುವರೆಗೆ ಈಡೇರಿಸಿಲ್ಲ.

ಸಾಮಾನ್ಯ ಜನರಿಗೆ ಹೊರೆಯಾಗದಂತೆ ಹಣಕಾಸು ಸ್ಥಿತಿಗತಿ ಸುಧಾರಿಸುವ ಸೃಜನಶೀಲ ಚಿಂತನೆಯೊಂದಿಗೆ ಬರುವಂತೆ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News