ಸಾಲುಮರದ ತಿಮ್ಮಕ್ಕನ ಮನವಿಗೆ ಸ್ಪಂದಿಸಿದ ಸಿಎಂ: ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ

Update: 2019-06-03 14:03 GMT

ಬೆಂಗಳೂರು, ಜೂ. 3: ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬಾಗೇಪಲ್ಲಿ-ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ ತಾಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಗಮನಕ್ಕೆ ತಂದರು. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಿಎಂ ಕುಮಾರಸ್ವಾಮಿ, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News