ಲೋಕಸಭೆ ಚುನಾವಣೆಯಲ್ಲಿ ಸೋಲು: ಅಧ್ಯಯನಕ್ಕೆ ಕೆಪಿಸಿಸಿ ಸತ್ಯ ಶೋಧನಾ ಸಮಿತಿ

Update: 2019-06-03 14:18 GMT

ಬೆಂಗಳೂರು, ಜೂ. 3: ಲೋಕಸಭೆ ಚುನಾವಣೆ ಮತ್ತು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಹೀಗಾಗಿ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣ ಹಾಗೂ ಜನರ ಅಭಿಪ್ರಾಯಗಳ ಅಧ್ಯಯನಕ್ಕೆ ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆ ಮಾಡಲಾಗಿದೆ.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಸಮಿತಿ ಸಂಚಾಲಕರಾಗಿದ್ದು, ಮಾಜಿ ಸಚಿವ ವೀರಕುಮಾರ್ ಪಾಟೀಲ್, ಪರಿಷತ್ ಸದಸ್ಯ ನಸೀರ್ ಅಹ್ಮದ್, ಮಾಜಿ ಸಂಸದ ಆರ್.ಧ್ರುವನಾರಾಯಣ್ ಸೇರಿದಂತೆ 5 ಮಂದಿ ಸದಸ್ಯರ ಸಮಿತಿ ರಚನೆ ಮಾಡಿ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

ಸಮಿತಿ ಪ್ರತಿ ಜಿಲ್ಲೆಗೆ ಭೇಟಿ ನೀಡಿ ವಿಧಾನಸಭಾ ಕ್ಷೇತ್ರವಾರು ಸಭೆಗಳನ್ನು ನಡೆಸಿ ಬೂತ್ ಮಟ್ಟದಿಂದ ರಾಜ್ಯಮಟ್ಟದ ವರೆಗಿನ ಮುಖಂಡರನ್ನು ಸಂಪರ್ಕಿಸಿ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣಗಳನ್ನು ತಿಳಿದುಕೊಳ್ಳುವುದು ಹಾಗೂ ಮುಂದೆ ಪಕ್ಷ ಸಂಘಟನೆಗೆ ಸಲಹೆಗಳನ್ನು ಪಡೆಯುವುದು ಹಾಗೂ ಈ ಬಗ್ಗೆ ಸಮಗ್ರ ವರದಿಯನ್ನು ಕೆಪಿಸಿಸಿ ಸಲ್ಲಿಸಬೇಕೆಂದು ಸಮಿತಿಗೆ ಸೂಚನೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News