ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮಿ

Update: 2019-06-03 15:21 GMT

ಬೆಂಗಳೂರು, ಜೂ. 3: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಮಾಜಿ ಸಚಿವ ಹಾಗೂ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಸೋಮವಾರ ಇಲ್ಲಿನ ಚಾಲುಕ್ಯ ವೃತ್ತದಲ್ಲಿನ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಸರಕಾರದಲ್ಲಿ ವಾಲ್ಮೀಕಿ ಸಮುದಾಯದವರಿಗೆ ನಾಲ್ಕು ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಮೈತ್ರಿ ಸರಕಾರದಲ್ಲಿ ಒಬ್ಬರಿಗೆ ಮಾತ್ರ ಸ್ಥಾನ ನೀಡಲಾಗಿದೆ ಎಂದು ದೂರಿದರು.

ಮೈತ್ರಿ ಸರಕಾರದಲ್ಲಿ ವಾಲ್ಮೀಕಿ ಸಮುದಾಯದವರಿಗೆ ತೀವ್ರ ಅನ್ಯಾಯವಾಗಿದ್ದು, ಪ್ರಸ್ತುತ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಅವರು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News