×
Ad

ಮಕ್ಕಳಲ್ಲಿ ಅತಿಸಾರ ಬೇಧಿ; ಸೂಕ್ತಕ್ರಮ ಅಗತ್ಯ: ಶೀಲಾ ಕೆ.ಶೆಟ್ಟಿ

Update: 2019-06-03 21:06 IST

ಉಡುಪಿ, ಜೂ.3: ಮಕ್ಕಳಲ್ಲಿ ಅತಿಸಾರ ಬೇಧಿ ಎನ್ನುವುದು ಹೇಳುವುದಕ್ಕೆ ಸಾಮಾನ್ಯವಾದರೂ ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಪಾಯದ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸುವುದು ಎಲ್ಲಾ ತಾಯಿಯಂದರ ಕರ್ತವ್ಯ ಎಂದು ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಕ್ಕಳಲ್ಲಿ ಅತಿಸಾರ ಬೇಧಿ ಕಾಣಿಸಿಕೊಂಡಾಗ ಆರೋಗ್ಯ ಸ್ಥಿರವಾಗಿ ಕಾಪಾಡಿ ಕೊಳ್ಳಲು ಓಆರ್‌ಎಸ್ ಜೊತೆಗೆ ಸರಿಯಾದ ಪ್ರಮಾಣದಲ್ಲಿ ಆಹಾರ ಸೇವನೆ ಅಗತ್ಯವಾಗಿದೆ. ಆರೋಗ್ಯಯುತ ದೇಶದ ನಿಮಾರ್ಣಕ್ಕೆ ಇಂತಹ ಜನ ಜಾಗೃತಿ ಕಾರ್ಯಕ್ರಮಗಳು ಅಗತ್ಯ. ಮಕ್ಕಳು ಆರೋಗ್ಯವಂತರಾಗಿ ಬೆಳೆದು ದೇಶದ ಆಧಾರ ಸ್ಥಂವಾಗಬೇಕು. ಮಕ್ಕಳು ಆರೋಗ್ಯವಂತರಾಗಿದ್ದರೆ ಭವಿಷ್ಯದಲ್ಲಿ ಆರೋಗ್ಯಯುತ ದೇಶ ನಿರ್ಮಾಣ ಸಾಧ್ಯ ಎಂದರು.

ಮಕ್ಕಳ ತಜ್ಞ ಡಾ.ವೇಣುಗೋಪಾಲ ಓಆರ್‌ಎಸ್ ತಯಾರಿಕಾ ವಿಧಾನದ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿ, ಓಆರ್‌ಎಸ್ ತಯಾರಿಸುವಾಗ ಸ್ವಚ್ಚತೆಯನ್ನು ಕಾಯ್ದುಕೊಂಡು ಸರಿಯಾದ ಪ್ರಮಾಣದಲ್ಲಿ ತಯಾರಿಸಿ ಎಂದ ಅವರು, ಅತಿಸಾರ ಬೇಧಿಯಿಂದ ಬಳಲುತ್ತಿರುವ ಮಕ್ಕಳಿಗೆ ಓಆರ್‌ಎಸ್ ಜೀವರಕ್ಷಕ ವಾಗಿದ್ದು ಶೇ.99ದಷ್ಟು ಜೀವ ಹಾನಿಯನ್ನು ತಪ್ಪಿಸುತ್ತದೆ ಎಂದರು.

ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್‌ರಾವ್, ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ನಿರ್ದೇಶಕ ಪ್ರಶಾಂತ್ ಮಲ್ಯ, ಆಸ್ಪತ್ರೆಯ ವೈದ್ಯಕೀಯ ಮುಖ್ಯಾಧಿಕಾರಿ ಡಾ.ಶಿಖಾ ಗರ್ಗ್, ತಾಪಂ ಉಪಾಧ್ಯಕ್ಷ ರಾಜೇಂದ್ರ ಪಿ., ಸಮಗ್ರ ಶಿಶು ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ವೀಣಾ ಉಪಸ್ಥಿತರಿದ್ದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಬಾರ ಅಧಿಕಾರಿ ಡಾ.ಎಂ.ಜಿ.ರಾಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನರ್ಸ್ ಎಜುಕೇಟರ್ ರೀನಾ ಕಾರ್ಯಕ್ರಮ ನಿರೂಪಿಸಿ, ರೋಟರಿ ಅಧ್ಯಕ್ಷ ಜನಾರ್ಧನ ಟ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News