ಜೂ. 6: ವಿಶ್ವ ಚಿತ್ತವಿಕಲತೆ ದಿನಾಚರಣೆ
Update: 2019-06-03 21:45 IST
ಮಂಗಳೂರು, ಜೂ.3: ದ.ಕ. ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗಳ ಸಹಯೋಗದೊಂದಿಗೆ ಜೂ.6ರಂದು ಪೂರ್ವಾಹ್ನ 11 ಗಂಟೆಗೆ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಆಡಿಟೋರಿಯಂನಲ್ಲಿ ವಿಶ್ವ ಚಿತ್ತವಿಕಲತೆ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿದೇರ್ಶಕ ಫಾ.ಮೈಕಲ್ ಸಾಂತುಮೆಯರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.