ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Update: 2019-06-03 17:37 GMT

ಮೈಸೂರು,ಜೂ.3: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ವಿದ್ಯಾನಗರ ನಿವಾಸಿ ಕವಿತಾ ಎಂಬುವವರು ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಮಕ್ಕಳೊಂದಿಗೆ ಊರಿಗೆ ಹೋಗಿದ್ದಾಗ ಅವರ ಮನೆಯ ಬಾಗಿಲು ಮುರಿದು 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕಳವು ಮಾಡಿದ್ದಾರೆ.

ಇವರು ಮೇ 14 ರಂದು ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದರು. ಮೇ 31 ರಂದು ಮನೆಗೆ ಮರಳಿದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಮನೆಯೊಳಗೆ ಇರುವ ಬೀರುವಿನ ಬಾಗಿಲು ಮುರಿದಿರುವ ಕಳ್ಳರು ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News