ಬಿಜೆಪಿ ವಿಜಯೋತ್ಸವ ವೇಳೆ ಕಾಂಗ್ರೆಸ್ ಮುಖಂಡರ ಅವಹೇಳನ ಆರೋಪ: ಖಂಡನೆ
Update: 2019-06-03 23:07 IST
ಬಂಟ್ವಾಳ, ಜೂ. 3: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ವಿಟ್ಲ ಸಮೀಪದ ಪುಣಚದಲ್ಲಿ ನಡೆದ ವಿಜಯೋತ್ಸವದ ಸಭೆಯಲ್ಲಿ ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್ ಮುಖಂಡ, ಕೊಳ್ನಾಡು ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್ ಅವರನ್ನು ಅವಾಚ್ಯವಾಗಿ ನಿಂದಿಸಿದ್ದು, ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಹೇಳಿದ್ದಾರೆ.
ಅವರು ಸೋಮವಾರ ವಿಟ್ಲ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮ ನಿಂದನೆ, ಜಾತಿನಿಂದನೆ ಮಾಡಿರುವುದು ಬಿಜೆಪಿ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಅವರು ದೂರಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣಚಂದ್ರ ಆಳ್ವ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕಾರ್ಯದರ್ಶಿ ರಮಾನಾಥ ವಿಟ್ಲ, ಪುಣಚ ಗ್ರಾಪಂ ಅಧ್ಯಕ್ಷೆ ಪ್ರತಿಭಾ ಶ್ರೀಧರ ಶೆಟ್ಟಿ, ಉಪಸ್ಥಿತರಿದ್ದರು.