ಅಮೆರಿಕದಲ್ಲಿ ಅಧ್ಯಯನ: ವಿದ್ಯಾರ್ಥಿಗಳಿಗೆ ಚೀನಾ ಎಚ್ಚರಿಕೆ

Update: 2019-06-03 18:34 GMT

ಬೀಜಿಂಗ್, ಜೂ. 3: ಅಮೆರಿಕದಲ್ಲಿ ಅಧ್ಯಯನ ಮಾಡುವುದರಲ್ಲಿ ಒಳಗೊಂಡಿರುವ ಅಪಾಯಗಳ ಬಗ್ಗೆ ಚೀನಾ ಸೋಮವಾರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದಕ್ಕೆ ಎಚ್ಚರಿಕೆ ನೀಡಿದೆ.

ಅಮೆರಿಕ ಮತ್ತು ಚೀನಾಗಳ ನಡುವಿನ ವಾಣಿಜ್ಯ ಸಮರದ ಹಿನ್ನೆಲೆಯಲ್ಲಿ, ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೀನಾದ ಎಚ್ಚರಿಕೆ ಹೊರಬಿದ್ದಿದೆ.

ಇತ್ತೀಚೆಗೆ ಅಮೆರಿಕದಲ್ಲಿ ಕಲಿಯಲು ಬಯಸಿರುವ ಕೆಲವು ಚೀನಿ ವಿದ್ಯಾರ್ಥಿಗಳು ವೀಸಾ ಅವಧಿಯ ವಿಷಯದಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ ಹಾಗೂ ವೀಸಾ ನಿರಾಕರಣೆ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ಶಿಕ್ಷಣ ಸಚಿವಾಲಯವನ್ನು ಉಲ್ಲೇಖಿಸಿ ಸರಕಾರಿ ಟೆಲಿವಿಶನ್ ವರದಿ ಮಾಡಿದೆ.

‘‘ಇದು ಕಲಿಯುವುದಕ್ಕಾಗಿ ಅಮೆರಿಕಕ್ಕೆ ಹೋಗುವ ಚೀನಿ ವಿದ್ಯಾರ್ಥಿಗಳ ಮೇಲೆ ಹಾಗೂ ಅವರು ತಮ್ಮ ಅಧ್ಯಯನವನ್ನು ಸುಗಮವಾಗಿ ಪೂರ್ಣಗೊಳಿಸುವ ಸಾಧ್ಯತೆಯ ಮೇಲೆ ಪರಿಣಾಮ ಬೀರಿದೆ’’ ಎಂದು ಸರಕಾರಿ ಟೆಲಿವಿಶನ್ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News