​ಅಂಗನವಾಡಿ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಮನವಿ

Update: 2019-06-04 12:45 GMT

ಕಾರ್ಕಳ, ಜೂ. 4: ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ನೀರೆ, ಕುಕ್ಕುಜೆ, ದೋಣಿಪಲ್ಕೆ, ಕೋಡಂಗೈ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ನಿಟ್ಟೆ ಪರಪ್ಪಾಡಿ, ಬೆಳ್ಮಣ್ ಪುನಾರ್, ರಾಗಿಹಕ್ಲು, ಪತ್ತೊಂಜಿಕಟ್ಟೆ, ಬಿಇಎಂ ಶಾಲೆ ಅಂಗನವಾಡಿ ಕೇಂದ್ರದ ಸಹಾಯಕಿಯರನ್ನು ಗುರುತಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ಆಯ್ಕೆ ಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜೂ.6ರೊಳಗೆ ಶಿಶು ಅಬಿವೃದ್ಧಿ ಯೋಜನಾ ಕಚೇರಿ,ತಾಲೂಕು ಪಂಚಾಯತ್ ಕಚೇರಿ, ಕಾರ್ಕಳ ಇಲ್ಲಿಗೆ ಲಿಖಿತವಾಗಿ ನೀಡುವಂತೆ ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ:  ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಪಂ, ನಗರಸಬೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇಲ್ಲಿನ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿದೆ. ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂ.6ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಇವರ ಕಚೇರಿಗೆ ಲಿಖಿತವಾಗಿ ಸಲ್ಲಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಬ್ರಹ್ಮಾವರ ಇವರ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿದೆ. ಈ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂ.6ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಬ್ರಹ್ಮಾವರ ಇವರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News