×
Ad

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತ್ಯು

Update: 2019-06-04 20:21 IST

ಬೆಂಗಳೂರು, ಜೂ.4: ನಗರದಲ್ಲಿ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜೆ.ಪಿ.ನಗರದ ಮುನಿರಾಜು ಎಂಬವರ ಪುತ್ರ ಅಕ್ಷಯ್(8) ಮೃತ ಬಾಲಕ ಎಂದು ತಿಳಿದುಬಂದಿದೆ.

ಶನಿವಾರ ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಕ್ಷಯ್ ಮಂಗಳವಾರ ಮೃತಪಟ್ಟಿದ್ದಾನೆ.

ಶಾಲಾ ಮಂಡಳಿ ನಿರ್ಲಕ್ಷದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬೆಸ್ಕಾಂ ನಿರ್ಲಕ್ಷಕ್ಕೆ ನಗರದ ಎಲ್ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ನಂತರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಗುಲಿ ನಿಖಿಲ್(14) ಮೃತಪಟ್ಟಿದ್ದನು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News