×
Ad

ನಾಳೆ ರಾಜ್ಯಾದ್ಯಂತ ಈದುಲ್ ಫಿತ್ರ್ ಆಚರಣೆ

Update: 2019-06-04 20:31 IST

ಬೆಂಗಳೂರು, ಜೂ.4: ರಾಜ್ಯಾದ್ಯಂತ ಈದುಲ್ ಫಿತ್ರ್ ಬುಧವಾರ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಟಿ ಮಾರುಕಟ್ಟೆ ಜಾಮಿಯಾ ಮಸೀದಿಯ ಖತೀಬ್ ಮೌಲಾನ ಮುಹಮ್ಮದ್ ಮಖ್ಸೂದ್ ಇಮ್ರಾನ್ ರಶಾದಿ ತಿಳಿಸಿದರು.

ಮಂಗಳವಾರ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯ ಬಳಿಕ ಅವರು ಮಾತನಾಡಿದರು.

ದೇಶದ ವಿವಿಧ ಭಾಗಗಳಲ್ಲಿ ಚಂದ್ರ ದರ್ಶನವಾಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರು ಬುಧವಾರ ಹಬ್ಬ ಆಚರಿಸಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ ಎಂದು ಮಖ್ಸೂದ್ ಇಮ್ರಾನ್ ರಶಾದಿ ಹೇಳಿದರು.

ರಾಜ್ಯದ ಸಮಸ್ತ ಮುಸ್ಲಿಮರಿಗೆ ಈದುಲ್ ಫಿತ್ರ್ ಹಾರ್ದಿಕ ಶುಭಾಶಯಗಳು. ಸರ್ವಶಕ್ತನಾದ ಅಲ್ಲಾಹ್ ಪ್ರತಿಯೊಬ್ಬರಿಗೂ ಈ ಪವಿತ್ರ ಹಬ್ಬದ ಪ್ರಯುಕ್ತ ಸುಖ, ಶಾಂತಿ, ಸಮೃದ್ಧಿಯನ್ನು ದಯಪಾಲಿಸಲಿ ಎಂದು ಅವರು ಹಾರೈಸಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್, ಧಾರ್ಮಿಕ ಮುಖಂಡರಾದ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನ ಎಜಾಝ್ ಅಹ್ಮದ್ ನದ್ವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News