×
Ad

ಕೇಂದ್ರ ಸಚಿವ ಡಿವಿಎಸ್‌ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು

Update: 2019-06-04 20:50 IST

ಬೆಂಗಳೂರು, ಜೂ.4: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡಗೆ ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೇ ಮಾತನಾಡುವುದು ಶೋಭೆಯಲ್ಲ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾತ್ರವಲ್ಲ, ಕಾರ್ಯ ಸಾಧ್ಯತಾ ವರದಿಯನ್ನೂ ಈಗಾಗಲೇ ಕೇಂದ್ರಕ್ಕೆ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಉಪ ನಗರ ರೈಲು ಯೋಜನೆಯ ಕುರಿತು ಫೆಬ್ರವರಿ ಕೊನೆಯ ವಾರದಲ್ಲಿ ಸ್ವತಃ ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಕಾರ್ಯಸಾಧ್ಯತಾ ವರದಿ ಅನುಮೋದನೆಗೆ ಸಂಬಂಧಿಸಿದ ಎಲ್ಲ ತೊಡಕುಗಳನ್ನು ನಿವಾರಿಸುವ ಕುರಿತು ಚರ್ಚೆ ನಡೆಸಿದ್ದರು. ಅದರಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರಕಾರಿ ಆದೇಶ ಮಾರ್ಪಡಿಸಲು ಅನುಮೋದನೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ರೈಲ್ವೆ ಸಚಿವಾಲಯದ ಮೇ 28ರ ಪತ್ರದಂತೆ ಎಸ್‌ಪಿವಿ(ವಿಶೇಷ ಕಾರ್ಯವಾಹಕ ವಾಹನ) ರಚನೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಿಜವಾಗಿಯೂ ಕಾಳಜಿ ಇದ್ದರೆ ‘ರಾಜಕೀಯ ಬೇಡ’ ಎನ್ನುವ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News