×
Ad

ಬ್ರಹ್ಮಾವರ: ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ

Update: 2019-06-04 21:06 IST

ಬ್ರಹ್ಮಾವರ: ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಉಡುಪಿ, ಜೂ.4: ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಸಮಾರಂಭ ಉದ್ಘಾಟಿಸಿ, ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞ ಡಾ. ಮಹಾಬಲ ಕೆ.ಎಸ್., ಓಆರ್‌ಎಸ್ ಪ್ರಾತ್ಯಕ್ಷಿಕೆ, ಓಆರ್‌ಎಸ್ ದ್ರಾವಣವನ್ನು ಮಕ್ಕಳಿಗೆ ಯಾವ ರೀತಿ ನೀಡಬೇಕು ಹಾಗೂ ಝಿಂಕ್ ಮಾತ್ರೆಯ ಉಪಯೋಗದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಪಂ ಸದಸ್ಯೆ ಕುಸುಮ ಪೂಜಾರಿ, ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನವೀನ್‌ಚಂದ್ರ ನಾಯಕ್, ಸದಸ್ಯರಾದ ದೇವಾನಂದ ಹಾಗೂ ನಿತ್ಯಾನಂದ, ಎನ್‌ಸಿಡಿ ವೈದ್ಯಾಧಿಕಾರಿ ಡಾ. ಎರಿಕ್ ಫೆರ್ನಾಂಡೀಸ್ ಉಪಸ್ಥಿತ ರಿದ್ದರು.

 ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಅನುಷಾ ಸ್ವಾಗತಿಸಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News