ಪುದುಚೇರಿ ಮುಖ್ಯಮಂತ್ರಿಗೆ ಸುಪ್ರೀಂ ನೋಟಿಸ್

Update: 2019-06-04 16:37 GMT

ಪುದುಚೇರಿ, ಜೂ.4: ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯಲ್ಲಿ ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಮಧ್ಯೆ ನಡೆಯುತ್ತಿರುವ ಅಧಿಕಾರ ತಿಕ್ಕಾಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪುದುಚೇರಿಯಲ್ಲಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಹಾಗೂ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಮಧ್ಯೆ ಅಧಿಕಾರದ ವಿಷಯದಲ್ಲಿ ತಿಕ್ಕಾಟ ನಡೆಯುತ್ತಿದೆ. ಕಿರಣ್ ಬೇಡಿ ರಾಜ್ಯ ಸರಕಾರದ ದೈನಂದಿನ ಆಡಳಿತದಲ್ಲಿ ಹಸ್ತಕ್ಷೇಪ ನಡೆಸಬಾರದು ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಈ ಆದೇಶಕ್ಕೆ ತಡೆ ಕೋರಿ ಬೇಡಿ ಸುಪ್ರೀಂ ಮೆಟ್ಟಿಲೇರಿದ್ದರು. ಬೇಡಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂಕೋರ್ಟ್‌ನ ರಜಾಕಾಲದ ಪೀಠವು ಮುಖ್ಯಮಂತ್ರಿಗೆ ನೋಟಿಸ್ ಜಾರಿಗೊಳಿಸಿದೆ.

ಅಲ್ಲದೆ, ಪುದುಚೇರಿಯಲ್ಲಿ ಜೂನ್ 7ರಂದು ನಡೆದ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಆರ್ಥಿಕ ಪರಿಣಾಮ ಬೀರುವ ನಿರ್ಧಾರಗಳನ್ನು ಜೂನ್ 21ರವರೆಗೆ ಅನುಷ್ಠಾನಗೊಳಿಸಬಾರದು ಎಂದು ಸರಕಾರಕ್ಕೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News