ಅನುಮಾನಾಸ್ಪದ ತಿರುಗಾಟ: ಇಬ್ಬರ ಸೆರೆ
Update: 2019-06-04 22:20 IST
ಮಂಗಳೂರು, ಜೂ.4: ನಗರದ ಮಿಲಾಗ್ರಿಸ್ ಸಮೀಪ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಚೆನ್ನೈ ನಿವಾಸಿಗಳಾದ ಹಬೀಬ್ ಮತ್ತು ಜಿಯಾವುದ್ದೀನ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 100 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ನಗರದ ಮಿಲಾಗ್ರಿಸ್ ಚರ್ಚ್ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಸಿಸಿಬಿ ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸಿದಾಗ ಸ್ಪಷ್ಟ ಉತ್ತರ ನೀಡಲಿಲ್ಲ. ಇದರಿಂದ ಶಂಕೆಗೊಂಡ ಪೊಲೀಸರು ಸೂಕ್ತ ದಾಖಲೆಗಳಿಲ್ಲದ 100 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.