ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟವಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ: ಯಡಿಯೂರಪ್ಪ

Update: 2019-06-05 12:44 GMT

ಬೆಂಗಳೂರು, ಜೂ.5: ರಾಜ್ಯದ ಸರಕಾರ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್(ಕ್ರಯಕ್ಕೆ) ನೀಡುವ ವಿಚಾರದಲ್ಲಿ ಭೂಮಿ ಮಾರಾಟ ಆಗದಂತೆ ಕೇಂದ್ರ ಸಚಿವರು, ಸಂಸದರು ಎಚ್ಚರಿಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನನ್ನು ಲೀಸ್ ನೀಡುವ ಸಚಿವ ಸಂಪುಟದ ನಿರ್ಣಯದ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರಕಾರ ಇಷ್ಟು ದೊಡ್ಡ ಪ್ರಮಾಣದ ಜಮೀನನ್ನು ಮಾರಾಟ ಮಾಡುವ ಹುನ್ನಾರ ಕೇಳಿ ಬರುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಜಿಂದಾಲ್ ಕಂಪೆನಿಗೆ ರಾಜ್ಯದ ಸಂಪತ್ತು ಮಾರಾಟ ಮಾಡದಂತೆ ರಾಜ್ಯ ಸಂಸದರು ಒತ್ತಡ ಹೇರಬೇಕಿದೆ. ಅಗತ್ಯಬಿದ್ದರೆ ಈ ವಿಷಯದಲ್ಲಿ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಬೇಕೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News