ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಿನ್ನಲೆ: ಜೂ.11-20ರವರೆಗೆ 7 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

Update: 2019-06-06 16:13 GMT

ಮಂಗಳೂರು, ಜೂ.6: ದ.ಕ.ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೂನ್ 11ರಿಂದ 20ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಸುಮಾರು 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ದ.ಕ. ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಿಷೇಧಿತ ಅವಧಿ ಮತ್ತು ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದನ್ನು ಸಂಪೂರ್ಣ ನಿಷೇಧಿಸಿದೆ. ಅಲ್ಲದೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಬಳಕೆ/ಸಾಗಾಟ ಮಾಡುವುದನ್ನೂ ಕೂಡ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ 1ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಕೂಡ ನಿಷೇಧಿಸಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳು ಹಾಗೂ ಕೇಂದ್ರ ಮುಖ್ಯ ಅಧೀಕ್ಷಕರ ಮಾಹಿತಿ ಹೀಗಿವೆ.
ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜು, ದೂ.ಸಂ: 0824-2407397 ಅಧೀಕ್ಷಕರು ಲಕ್ಷ್ಮಿ ಪಿಒ ಮೊ.ಸಂ: 8105654397, ಬಲ್ಮಠ ಸರಕಾರಿ ಪದವಿ ಪೂರ್ವ ಕಾಲೇಜು, ದೂ.ಸಂ: 0824-2443557, ಅಧೀಕ್ಷಕರು ಮಾರ್ಯೆಟ್ ಮಸ್ಕರೇನಸ್ ಮೊ.ಸಂ: 9480156647, ಬೆಸೆಂಟ್ ಪದವಿ ಪೂರ್ವ ಕಾಲೇಜು, ದೂ.ಸಂ: 0824-2495650, ಅಧೀಕ್ಷಕರು ನಾಯಕ್ ರೂಪ್‌ಸಿಂಗ್, ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು, ದೂ.ಸಂ: 08251-230686 ಅಧೀಕ್ಷಕರು ಎನ್.ಕೆ. ಸುರೇಶ್ ಮೊ.ಸಂ: 8453648846, ಬಂಟ್ವಾಳ ವೆಂಕಟ್ರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ದೂ.ಸಂ: 08255-232413, ಅಧೀಕ್ಷಕರು ಶಶಿಕಲಾ ಕೆ. ಮೊ.ಸಂ: 9480231268, ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ದೂ.ಸಂ: 08256-232109, ಅಧೀಕ್ಷಕರು ಸುಕುಮಾರ್ ಮೊ. ಸಂ: 9449467723, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು, ದೂ.ಸಂ.: 08257-230363, ಅಧೀಕ್ಷಕರು ಮೋಹನ ಗೌಡ ಜಿ.ಕೆ. ಮೊ.ಸಂ: 8618582653.
ಈ ಆದೇಶವು ದ.ಕ.ಜಿಲ್ಲೆಯಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀ.ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News