ಪಿಎಚ್‌ಡಿ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2019-06-06 16:39 GMT

ಬೆಂಗಳೂರು, ಜೂ.6: ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಕೋರ್ಸಿನ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳಿಗೆ ಪ್ರವೇಶವು ಪ್ರವೇಶ ಪರೀಕ್ಷೆಯ ಆಧಾರದಲ್ಲಿ ನಡೆಯಲಿದ್ದು, ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಹಾಗೂ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಪಡೆಯಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಗದಿಪಡಿಸಿದ ಅರ್ಜಿ ನಮೂನೆ ಹಾಗೂ ಅರ್ಹತೆ, ಪ್ರವೇಶ ಶುಲ್ಕ ಹಾಗೂ ಅದರ ಪಾವತಿ, ವಿಭಾಗವಾರು ಖಾಲಿ ಇರುವ ಸೀಟುಗಳು ಹಾಗೂ ಪ್ರವೇಶಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯ ವೆಬ್‌ಸೈಟ್ bangaloreuniversity.ac.in/buphd.inhawk.com ಸಂಪರ್ಕಿಸುವುದು.

ಅಂತರ್‌ಜಾಲದಲ್ಲಿ ಸಲ್ಲಿಸಿದ ಮೂಲ ಅರ್ಜಿಯ ಪ್ರತಿಯನ್ನು ವಿಶ್ವವಿದ್ಯಾಲಯಕ್ಕೆ ತಲುಪಿಸಲು ಜು.23 ಕೊನೆಯ ದಿನವಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಪೂರ್ಣವಾಗಿ ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಿ, ಸಂಬಂಧಪಟ್ಟ ದಾಖಲೆಗಳು ಹಾಗೂ ಆನ್‌ಲೈನ್ ಒಂದು ಪ್ರತಿಯನ್ನು ಕುಲಸಚಿವರು (ಮೌಲ್ಯಮಾಪನ), ಪರೀಕ್ಷಾ ಭವನ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು- 560 056 ಇವರಿಗೆ ಜು.23 ಸಂಜೆ 5ರೊಳಗೆ ತಲುಪುವಂತೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸತಕ್ಕದ್ದು. ನಿಗದಿತ ಅರ್ಜಿಗಳನ್ನು ಅಂತರ್‌ಜಾಲದ ಮೂಲಕ ಮಾತ್ರ ಪಡೆಯತಕ್ಕದ್ದು ಹಾಗೂ ಅವುಗಳನ್ನು ಕಚೇರಿಯಲ್ಲಿ ವಿತರಿಸಲಾಗುವುದಿಲ್ಲವೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News