ಲಂಕಾ: ಸುಳ್ಳು ಸುದ್ದಿ, ದ್ವೇಷ ಭಾಷಣ ಹರಡುವವರಿಗೆ 5 ವರ್ಷ ಜೈಲು

Update: 2019-06-06 17:25 GMT

ಕೊಲಂಬೊ, ಜೂ. 6: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಮತ್ತು ದ್ವೇಷ ಭಾಷಣಗಳನ್ನು ಹರಡುವವರಿಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಅವಕಾಶ ನೀಡುವ ಪ್ರಸ್ತಾವವೊಂದನ್ನು ಶ್ರೀಲಂಕಾ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ ಎಂದು ಸ್ಥಳೀಯ ಸುದ್ದಿ ವೆಬ್‌ಸೈಟ್ ‘ಅಡ ಡೆರನ’ ವರದಿ ಮಾಡಿದೆ.

ಅಪರಾಧಿಗಳಿಗೆ 10 ಲಕ್ಷ ಶ್ರೀಲಂಕಾ ರೂಪಾಯಿ (ಸುಮಾರು 4 ಲಕ್ಷ ಭಾರತೀಯ ರೂಪಾಯಿ) ದಂಡ ವಿಧಿಸಲಾಗುವುದು.

ಈಸ್ಟರ್ ರವಿವಾರ ನಡೆದ ಆತ್ಮಹತ್ಯಾ ಬಾಂಬ್ ದಾಳಿಗಳ ಬಳಿಕ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ಪ್ರಸಾರದಲ್ಲಿ ಆಗಿರುವ ಹೆಚ್ಚಳದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಸರಕಾರ ತೆಗೆದುಕೊಂಡಿದೆ.

ಎಪ್ರಿಲ್ 21ರಂದು ನಡೆದ ಸರಣಿ ಸ್ಫೋಟಗಳಲ್ಲಿ 258 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಶ್ರೀಲಂಕಾ ಪೊಲೀಸರು ಅಂದಿನಿಂದ 1,000ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.

ದಾಳಿಗಳ ಬೆನ್ನಲ್ಲೇ ಸರಕಾರವು ಫೇಸ್‌ಬುಕ್ ಮತ್ತು ವಾಟ್ಸ್‌ಆ್ಯಪ್ ಮುಂತಾದ ಸಾಮಾಜಿಕ ಜಾಲತಾಣಗಳನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News