×
Ad

ನರೇಂದ್ರ ಮೋದಿಯನ್ನು ಭೇಟಿಯಾದ ಕಮಲ್‌ನಾಥ್

Update: 2019-06-06 23:20 IST

ಹೊಸದಿಲ್ಲಿ, ಜೂ. 6: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ಸಂದರ್ಭ ಅಧಿಕೃತ ವಿಚಾರಗಳ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

 ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿದ ಬಳಿಕ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ ಬಳಿಕ ಇಬ್ಬರು ನಾಯಕರ ಮೊದಲ ಭೇಟಿ ಇದಾಗಿದೆ.

ಚುನಾವಣಾ ಪ್ರಚಾರದ ಸಂದರ್ಭ ಕಮಲ್‌ನಾಥ್ ಹಾಗೂ ನರೇಂದ್ರ ಮೋದಿ ಅವರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದರು. ಕಮಲ್‌ನಾಥ್ ಅವರು ಮೋದಿಯನ್ನು ‘ವಿಭಜನೆಯ ಮುಖ್ಯಸ್ಥ’ ಎಂದಿದ್ದರು. ಮೋದಿ ಅವರು ಕಮಲ್ ನಾಥ್ ಅವರು 1984ರ ಸಿಕ್ಖ್ ದಂಗೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರೋಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News