ರಾಜೀನಾಮೆ ನೀಡಲು ನಾನು ಈಗಲೂ ಸಿದ್ಧ: ಸಂಸದ ಪ್ರಜ್ವಲ್‌ ರೇವಣ್ಣ

Update: 2019-06-06 18:02 GMT

ಹಾಸನ,ಜೂ.6:ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಹೇಳಿದ ಮಾತಿನಂತೆ ನಾನು ಈಗಲೂ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಆದರೆ ದೇವೇಗೌಡರು ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವ ನಿರ್ಧಾರ ಕಾಯುತ್ತಿರುವುದಾಗಿ ಸಂಸದರಾದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಮಾವಿನಹಣ್ಣು ಮೇಳಕ್ಕೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮುಂದೆ ಇಡಲಾಗಿದೆ. ದೇವೇಗೌಡರು ಹಾಸನ ಜಿಲ್ಲೆಯಿಂದ ಸ್ಪರ್ಧಿಸಿದರೇ ನಾನು ರಾಜೀನಾಮೆ ಕೊಡಲು ಮುಂದಾಗುತ್ತೇನೆ ಎಂದರು.

ರಾಜ್ಯ ಸರಕಾರಕ್ಕೆ ಯಾವುದೇ ದಕ್ಕೆ ಇಲ್ಲ 5 ವರ್ಷ ಭದ್ರವಾಗಿರುತ್ತದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಒಳ್ಳೇ ನಿರ್ಧಾರವಾಗಿದೆ. ಹೀಗೆ ಮಾಡುವುದರಿಂದ ಜನರ ಸಮಸ್ಯೆ ಕಡೆ ಹೆಚ್ಚಿನ ಗಮನ ಹರಿಸಿ ಇನ್ನಷ್ಟು ಒಳ್ಳೆ ಕೆಲಸ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು. ಆದರೇ ಬಿಜೆಪಿ ಸರಕಾರ ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಖಂಡನೆ ವ್ಯಕ್ತಪಡಿಸಿದ ಅವರು, ಒಳ್ಳೆ ಕೆಲಸ ಮಾಡಲು ಬೆಂಬಲ ಕೊಡಬೇಕು. ಹೀಗೆಲ್ಲ ಮಾಡುವುದು ಸರಿಯಲ್ಲ. ಸರಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಸರಕಾರ ಸುಭದ್ರವಾಗಿದೆ. ಇದು ಬಿಜೆಪಿಯ ಐದನೇ ಡೆಡ್ ಲೈನ್ ಆಗಿದೆ. ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ಕೆಲ ದೂರುಗಳ ವಿಚಾಗಳಿಗೆ ಬೇಸರ ಮಾಡಿಕೊಂಡಿದ್ದರು. ಈಗಾಗಲೇ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೆಡಿಎಲ್‌ಪಿ ಸಭೆಯಲ್ಲಿ ಕೂಡ ಅವರು ಭಾಗಿಯಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟುತ್ತೇವೆ. ಎರಡು ಮೂರು ದಿನದಲ್ಲಿ ಅವರು ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಈಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಎಚ್.ಪಿ. ಸ್ವರೂಪ್ ಸೇರಿದಂತೆ ವುತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News