ಕಾಪು: ಡಿವೈಡರ್ ಗೆ ಬೈಕ್ ಢಿಕ್ಕಿ- ಸವಾರ ಮೃತ್ಯು

Update: 2019-06-07 12:46 GMT

ಕಾಪು: ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡದಿದೆ.

ಇಲ್ಲಿನ ಮಯೂರ ಹೋಟೆಲ್ ಬಳಿ ಘಟನೆ ನಡೆದಿದ್ದು, ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆಯಿತು. ಮೃತನ ಹೆಸರು ಇನ್ನೂ ತಿಳಿದುಬಂದಿಲ್ಲ. ಈ ದೃಶ್ಯ ಸಮೀಪದ ಹೊಟೇಲ್‍ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News