×
Ad

ಅತ್ತಾವರ : ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯ ಮೃತದೇಹ ಪತ್ತೆ; ಕೊಲೆ ಶಂಕೆ

Update: 2019-06-07 19:40 IST

ಮಂಗಳೂರು, ಜೂ.8: ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳ ಮೃತದೇಹ ನಗರದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ.

ನಗರದ ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಈಕೆಯನ್ನು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಮಂಜುನಾಥ ವೈ.ಎನ್. ಎಂಬವರ ಪುತ್ರಿ ಅಂಜನಾ ವಶಿಷ್ಟ (22) ಎಂದು ಗುರುತಿಸಲಾಗಿದೆ.

ಅತ್ತಾವರ ಮೆಡಿಕಲ್ ಕಾಲೇಜೊಂದರ ಬಳಿ ಪೇಯಿಂಗ್ ಗೆಸ್ಟ್ ಆಗಿರುವ ಈಕೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರಬೇಕು ಎಂದು ಶಂಕಿಸಲಾಗಿದೆ.

ಮಂಚದ ಸರಳಿನೆಡೆಯಲ್ಲಿ ಈಕೆಯ ಕತ್ತು ಕಂಡು ಬಂದಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿವೆ. ಈಕೆಯ ಬಳಿ ಇದ್ದ ಆಧಾರ್ ಕಾರ್ಡ್‌ನ ಆಧಾರದ ಮೇಲೆ ಗುರುತು ಪತ್ತೆ ಹಚ್ಚಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News