×
Ad

ದೈಹಿಕ, ಬೌದ್ಧಿಕ ಬೆಳವಣೆಗೆ ಯಕ್ಷಗಾನ ಸಹಕಾರಿ: ಎಂ.ಎಸ್.ಭಟ್

Update: 2019-06-07 20:21 IST

ಉಡುಪಿ, ಜೂ.7: ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ತೊಡಗಿಸಿಕೊಂಡರೆ ದೈಹಿಕ ಹಾಗೂ ಬೌದ್ಧಿಕ ಬೆಳವಣೆಗೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಾಠ್ಯದೊಂದಿಗೆ ಪಾಠ್ಯಯೇತರ ಚಟುವಟಿಕೆಗಳಲ್ಲೂ ಆಸಕ್ತಿ ವಹಿಸಬೇಕು ಎಂದು ರಂಗನಟ, ಯಕ್ಷಗಾನ ಕಲಾವಿದ ಎಂ.ಎಸ್.ಭಟ್ ಹೇಳಿದ್ದಾರೆ.

ಸುಮನಸಾ ಕೊಡವೂರು ಸಂಸ್ಥೆಯು ಯಕ್ಷಗಾನ ಕೇಂದ್ರ ಇಂದ್ರಾಳಿ, ಕನ್ನಡ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕೊಡವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಮಾರ್ಗದರ್ಶನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾದ ಯಕ್ಷಗಾನ ಹೆಜ್ಜೆ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಸುಮನಸಾದ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಜೊತೆ ಕಾರ್ಯದರ್ಶಿ ಪ್ರಜ್ಞಾ ಅಮೀನ್, ಯಕ್ಷಗಾನ ಗುರು ನಿಶ್ಚಲ್ ಉಪಸ್ಥಿತರಿದ್ದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. 20 ದಿನಗಳ ಕಾಲ ನಡೆದ ಶಿಬಿರದಲಿ್ಲ 30 ಶಿಬಿರಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News