ಉಡುಪಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನಿಷೇಧಾಜ್ಞೆ
Update: 2019-06-07 20:27 IST
ಉಡುಪಿ, ಜೂ.7: ಜಿಲ್ಲೆಯಲ್ಲಿ 2019ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಜೂ.11ರಿಂದ 20ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಎಂಜಿಎಂ ಪದವಿ ಪೂರ್ವ ಕಾಲೇಜು ಉಡುಪಿ, ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ, ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆಯಲಿದೆ.
ಪರೀಕ್ಷೆಗಳು ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ನಿಗದಿ ಪಡಿಸಿದ ಎಲ್ಲಾ 4 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.