ಜೂ.12: ಪದುವಾ ಕಾಲೇಜಿನಲ್ಲಿ ಉದ್ಯೋಗ ಮೇಳ
Update: 2019-06-07 20:30 IST
ಮಂಗಳೂರು, ಜೂ.7: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವು ಜೂ.12ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಪದುವಾ ಕಾಲೇಜಿನಲ್ಲಿ ನಡೆಯಲಿದೆ.
ಈ ಮೇಳದಲ್ಲಿ ಸುಮಾರು 25ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು. ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಮಾಹಿತಿಗಾಗಿ ದೂ.ಸಂ: 0824-2457139ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.