×
Ad

ಜೂ.11: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ

Update: 2019-06-07 20:48 IST

 ಮಂಗಳೂರು, ಜೂ.7: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಜೂ.11ರಂದು ಬೆಳಗ್ಗೆ 10ಗಂಟೆಗೆ ಮಲ್ಲಿಕಟ್ಟೆಯಲ್ಲಿರುವ ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ನಡೆಯಲಿದೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಂಸದರು ಮತ್ತು ಶಾಸಕರುಗಳು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿರುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News