ಕೋಲ್ಕತಾದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ

Update: 2019-06-08 05:11 GMT

ಕೋಲ್ಕತಾ, ಜೂ.8: ಇಲ್ಲಿನ  ಹೌರಾದಲ್ಲಿರುವ  ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ  ನಸುಕಿನ ವೇಳೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು,  ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್‌ ಫ್ಯಾಕ್ಟರಿ ಗೋದಾಮಿನಲ್ಲಿ ಬೆಂಕಿ  ಕಾಣಸಿಕೊಂಡಿದೆ. ಇದರಿಂದಾಗಿ  ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ಆಗಮಿಸಿರುವ 20 ಕ್ಕೂ ಹೆಚ್ಚು ವಾಹನಗಳೊಂದಿಗೆ  ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News