ಮಳೆ ಅನಾಹುತ ತಡೆಗೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಸೂಚನೆ

Update: 2019-06-08 14:08 GMT

ಬೆಂಗಳೂರು, ಜೂ.8: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಎಲ್ಲಾ ವಲಯಗಳಲ್ಲಿನ ಎಂಜಿನಿಯರ್‌ಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಎಲ್ಲ ವಲಯಗಳ ಮುಖ್ಯ ಎಂಜಿನಿಯರ್‌ಗಳು ತಮ್ಮ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಇಇ, ಎಇಇ, ಎಇ ಮತ್ತಿತರ ಅಧಿಕಾರಿಗಳೊಂದಿಗೆ ಪ್ರತಿ 10 ದಿನಗಳಿಗೊಮ್ಮೆ ಮಳೆಗಾಲದಿಂದ ಆಗುವ ಅನಾಹುತಗಳ ಬಗ್ಗೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಬೇಕು. ಅಲ್ಲದೇ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಸಮಗ್ರ ವರದಿಯನ್ನು ತಮಗೆ ಕಳುಹಿಸಿ ಕೊಡಬೇಕು ಎಂದು ತಿಳಿಸಿದ್ದಾರೆ.

ಪ್ರತಿ ಸಭೆಗಳಲ್ಲೂ ಹಿಂದಿನ ಸಭೆಗಳಲ್ಲಿ ಕೈಗೊಂಡ ನಿರ್ಧಾರಗಳು ಜಾರಿಯಾಗಿವೆಯೆ ಎಂಬ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಈ ಎಲ್ಲ ಅಗತ್ಯ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಲು ವಿಶೇಷ ಆಯುಕ್ತರಿಗೆ (ಯೋಜನೆ) ಅಧಿಕಾರ ನೀಡಲಾಗಿದೆ ಎಂದು ಮೇಯರ್ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News