×
Ad

ದಲಿತ ಸಮುದಾಯಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಬೇಕು: ಬಿಜೆಪಿ ಶಾಸಕ ಯತ್ನಾಳ್

Update: 2019-06-08 19:43 IST

ವಿಜಯಪುರ, ಜೂ. 8: ಕೇಂದ್ರ ಸಂಪುಟದಲ್ಲಿ ಲಿಂಗಾಯತರು ಮತ್ತು ದಲಿತ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದಿಲ್ಲಿ ಆಗ್ರಹಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಉತ್ತರ ಕರ್ನಾಟಕ ಭಾಗದ ದಲಿತ ಸಂಸದರಿಗೂ ಸಚಿವ ಸ್ಥಾನ ನೀಡಬೇಕು ಎಂದು ಕೋರಿದರು.

‘ಕೇಂದ್ರ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ ಎಂಬ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಸರಿಯಾಗಿದೆ. ಈ ಭಾರಿಯೂ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಯತ್ನಾಳ್ ತಿಳಿಸಿದರು.

ಗ್ರಾಮ ವಾಸ್ತವ್ಯ ನಾಟಕ: ಸಿಎಂ ಗ್ರಾಮ ವಾಸ್ತವ್ಯ ಒಂದು ನಾಟಕ. ಇಷ್ಟು ದಿನ ಕುಮಾರಸ್ವಾಮಿ ಐಷಾರಾಮಿ ಹೊಟೇಲ್‌ನಲ್ಲಿ ವಾಸ ಮಾಡಿ ಇದೀಗ ಅವರು ಗ್ರಾಮ ವಾಸ್ತವ್ಯಕ್ಕೆ ತೆರಳಿದರೆ ಏನು ಕಥೆ ಎಂದು ಎಲ್ಲರಿಗೂ ಗೊತ್ತು ಎಂದು ಯತ್ನಾಳ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಂದಾಲ್ ಕಂಪೆನಿಗೆ ಸರಕಾರಿ ಭೂಮಿ ಹಸ್ತಾಂತರದ ಹಿಂದೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿ ಜಿಂದಾಲ್‌ಗೆ ನೀಡಲು ಮುಂದಾಗಿರುವ ಭೂಮಿಯನ್ನು ಹಿಂಪಡೆಯಬೇಕು. ಈ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ ಅಗತ್ಯ ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News