×
Ad

ಭೂ ಸ್ವಾಧೀನ ಕಾಯ್ದೆಗೆ ವಿರೋಧ: ಜೂ.1ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ

Update: 2019-06-09 22:45 IST

ಬೆಂಗಳೂರು, ಜೂ.9: ಭೂ ಸ್ವಾಧೀನ ಕಾಯ್ದೆ ವಿರೋಧಿಸಿ ರೈತರು ಸೋಮವಾರ (ಜೂ.10) ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ಸರಕಾರವು ಭೂ ಸ್ವಾಧೀನ ಕಾಯ್ದೆ ಜಾರಿಗೆ ತಂದಿತ್ತು. ಈ ಕಾಯ್ದೆ ಪ್ರಕಾರ ರೈತರ ಅನುಮತಿ ಪಡೆದು ಭೂ ಸ್ವಾಧೀನ ಪ್ರಕ್ರಿಯೆ ನಡೆಸಬೇಕು. ರೈತರಿಗೆ ನೀಡುವ ಪರಿಹಾರ ಧನ ತೃಪ್ತಿಕರವಾಗಿರಬೇಕು. ರೈತರು ತಮಗೆ ಸಿಕ್ಕ್ಕಿರುವ ಪರಿಹಾರಕ್ಕೆ ಅತೃಪ್ತಿ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಲು ಅವಕಾಶ ಕಲ್ಪಿಸಲಾಗಿತ್ತು.

ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಕಾಯ್ದೆಯನ್ನೆ ಬದಲಾವಣೆ ಮಾಡಿದೆ. ರೈತರ ಸಾಲ ಮನ್ನಾ ಬಗ್ಗೆ ಕೇಂದ್ರ ಸರಕಾರದಲ್ಲಿ ಸ್ಪಷ್ಟವಾದ ಚಿತ್ರಣವಿಲ್ಲ ಹಾಗೂ ಬರಗಾಲದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ತೀರ್ಮಾನ ಕೈಗೊಂಡಿದ್ದಾರೆ.

ಬೊಮ್ಮಸಂದ್ರ ರಾಷ್ಟ್ರೀಯ ಹೆದ್ದಾರಿ, ದೇವನಹಳ್ಳಿ ಟೋಲ್ ಪ್ರವೇಶ, ಚಿಕ್ಕಬಳ್ಳಾಪುರ ಟೋಲ್ ಪ್ರವೇಶ, ತುಮಕೂರು, ಕೋಲಾರ, ಚಿತ್ರದುರ್ಗ, ಆನೇಕಲ್ ಹಾಗೂ ಹಾವೇರಿ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ರೈತರು ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News