×
Ad

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಸಾಗಾಟ: 48 ಶಾಲಾ ವಾಹನಗಳ ವಿರುದ್ಧ ಕೇಸು

Update: 2019-06-10 21:05 IST

ಮಂಗಳೂರು, ಜೂ.10: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಾಲಾ ವಿದ್ಯಾರ್ಥಿಗಳನ್ನು ತುಂಬಿಸಿ ಕೊಂಡು ಹೋಗುತ್ತಿದ್ದ 48 ಶಾಲಾ ವಾಹನಗಳ ವಿರುದ್ಧ ಕೇಸು ದಾಖಲಿಸಲಾಗಿದೆ.

ನಗರದ ಶಾಲಾ ವಾಹನಗಳಲ್ಲಿ ಓವರ್‌ಲೋಡ್ ಮಾಡಿ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇತ್ತೀಚೆಗೆ ಶಾಲಾ ಆಡಳಿತ ಮಂಡಳಿ ಸಭೆ ಕರೆಯಲಾಗಿತ್ತು. ಆದರೂ ಕೆಲವು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳನ್ನು ಕೊಂಡೊಯ್ಯಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಎರಡು ವಾರದಲ್ಲಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ 175 ವಾಹನಗಳು ಹಾಗೂ 48 ಸ್ಕೂಲ್ ವ್ಯಾನ್, ಆಟೋಗಳ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News