ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ವಿತರಣಾ ಕಾರ್ಯಕ್ರಮ

Update: 2019-06-10 15:57 GMT

ಭಟ್ಕಳ: ಇಲ್ಲಿನ ನಿಚ್ಛಲಮಕ್ಕಿ ಶ್ರಿ ತಿರುಮಲ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಶಿಶು ಅಭಿವೃದ್ಧಿ ಯೋಜನೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ವಿತರಣಾ ಕಾರ್ಯಕ್ರಮ ನಡೆಯಿತು 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ಸಮಾಜದಲ್ಲಿ ತಲತಲಾಂತರದಿಂದ ರೂಡಿಯಲ್ಲಿರುವ ಮೂಢನಂಬಿಕೆಗಳಲ್ಲಿ ಹೆಚ್ಚಿನವು ಒಳಗೊಳ್ಳುವುದು ಮಹಿಳೆಯನ್ನು. ಸಂಪ್ರದಾಯ ಮತ್ತು ನಂಬಿಕೆಗಳನ್ನು ಹುಟ್ಟುಹಾಕುವುದು ಪ್ರಮುಖವಾಗಿ ಸಮಾಜದ ಪುರುಷ ಪ್ರದಾನ ಪ್ರವೃತ್ತಿ. ಇದರಿಂದ  ಹುಟ್ಟಿದ ಮೂಡನಂಬಿಕೆಗಳಿಗೆ ಹೆಣ್ಣೆ ಮುಖ್ಯವಾಗಿ ಗುರಿಯಾಗುತ್ತಿದ್ದಾಳೆ, ಮಾನವ ಜನ್ಮದಲ್ಲಿಯೇ ಹೆಣ್ಣಿನ ಜನ್ಮ ಶ್ರೇಷ್ಠವಾದಂತಹ ಜನ್ಮ. ಹೆಣ್ಣು ಮಗು ಹುಟ್ಟಿದರೆ ಅದು ಶಾಪವಲ್ಲ, ಬದಲಾಗಿ ವರ ಎಂದು ಖಚಿತಪಡಿಸಲು  ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಆಗಿನ ಸರ್ಕಾರ 2006-07 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದರು. 

ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಯೋಜನೆಯ ಲಾಭ ದೊರೆಯಲಿದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಪೋಷಕರು ಹಿಂದೇಟು ಹಾಕಬಾರದು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ನುಡಿಯನ್ನು ನಿಜ ಮಾಡಬೇಕು. ಮಹಿಳಾಪರ ಕಾಳಜಿ ಇರುವ ಈ ಯೋಜನೆ ನಿರಂತರವಾಗಿ ಮುಂದುವರಿಯಲಿದೆ.

ಈ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಕಿ ಉಳಿದಿದ್ದ, ಭಟ್ಕಳ ತಾಲ್ಲೂಕಿನ ಸರಿ ಸುಮಾರು 350 ಭಾಗ್ಯಲಕ್ಷ್ಮಿ ಯೋಜನೆಯನ್ನು ಬಾಂಡ್ನ್ನು ಇಂದು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ್ದು ಮುಂದಿನ ದಿನಗಳಲ್ಲಿ ಬಾಕಿ ಇರುವ ಬಾಂಡಗಳನ್ನು ಫಲಾನುಭವಿಗಳಿಗೆ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾ.ಪ.ಸದಸ್ಯ ಹನುಮಂತ ನಾಯ್ಕ, ವಹಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಬಾಕರ ಚಿಕ್ಕ ಮನೆ ಮಾತನಾಡಿದರು.

ಕಾರ್ಯಕ್ರಮ ವೇದಿಕೆ ಯಲ್ಲಿ ಕೊಣಾರ ಪಂಚಾಯತ್ ಅಧ್ಯಕ್ಷ ಮಂಜುನಾಥ ನಾಯ್ಕ,ದೇವಸ್ಥಾನ ಆಡಳಿತ ಕಮಿಟಿ ಸದಸ್ಯ ರಾಜೇಶ್ ನಾಯ್ಕ, ಸುಬ್ರಾಯ ನಾಯ್ಕ,ಲಕ್ಷ್ಮಿನಾರಾಯಣ ನಾಯ್ಕ , ಪುರಸಭೆಯ ನೂತನ ಸದಸ್ಯ ರಾಘವೇಂದ್ರ ಶೇಟ್.ಕಾರ್ಯಕ್ರಮ ಕೊನೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News