26 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಸೆರೆ

Update: 2019-06-10 17:50 GMT

ಬೆಳ್ತಂಗಡಿ: ಇಪ್ಪತ್ತಾರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಶ್ರೀ ಗಂಧ ಕಳವು ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿವಾಸಿ ವೇಲಾಯುಧನ್ ಎಂದು ತಿಳಿದುಬಂದಿದೆ.

ಈತನ ವಿರುದ್ದ 2008 ರಲ್ಲಿ ವಾರೆಂಟ್ ಜಾರಿಗೊಳಿಸಲಾಗಿತ್ತು ಆದರೆ ಈತ ಈ ವರೆಗೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತ ಮೂಡಿಗೆರೆಯಲ್ಲಿ ವಾಸವಿರುವ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿ ಎಸೈ ರವಿ ನೇತೃತ್ವದ ತಂಡ ಆರಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಠಾಣಾಧಿಕಾರಿ ರವಿ ಅವರ ನೇತೃತ್ವದಲ್ಲಿ ಕಳೆದ ಒಂದು ತಿಂಗಳಿನಲ್ಲಿ ಈ ರೀತಿ ತಲೆಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News