ಬೆಂಗಳೂರು: 5 ತಿಂಗಳ ಮಗು ಸೇರಿ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

Update: 2019-06-11 13:33 GMT

ಬೆಂಗಳೂರು, ಜೂ.11: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮನೋರಾಯನ ಪಾಳ್ಯದ ನಿವಾಸಿ ಪುಷ್ಪಾವತಿ(30) ಹಾಗೂ ಅವರ ಮಗ ಜೀವನ್ ಮತ್ತು 5 ತಿಂಗಳ ಮಗು ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಮೃತ ಪುಷ್ಪಾವತಿ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿದ್ದು, 10 ವರ್ಷಗಳ ಹಿಂದೆ ನಾಗರಾಜ್ ಎಂಬುವರನ್ನು ವಿವಾಹವಾಗಿದ್ದರು ಎನ್ನಲಾಗಿದೆ.

ಮರಣೋತ್ತರ ಪರೀಕ್ಷೆಗೆ ಮೃತ ದೇಹಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News