​ಬಂಟ್ವಾಳ: ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು

Update: 2019-06-11 14:36 GMT

ಬಂಟ್ವಾಳ, ಜೂ. 11: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತರನ್ನು ಬಾರಕಿನಡಿ ನಿವಾಸಿಗಳಾದ ಗೋಪಾಲಕೃಷ್ಣ (63), ಇವರ ಮಗಳು ದಿವ್ಯಾಶ್ರಿ (32) ಎಂದು ತಿಳಿದುಬಂದಿದೆ.

ಘಟನೆ

ಮಂಗಳವಾರ ಸಂಜೆ ತಂದೆ ಮಗಳೊಂದಿಗೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ವೃತ್ತ ನಿರೀಕ್ಷಕ ಶರಣಗೌಡ, ಎಸ್ಸೈ ಸುಧಾಕರ ತೋನ್ಸೆ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಸಿಬ್ಬಂದಿ ಸುರೇಶ್, ವರ್ಗೀಸ್, ಜಯರಾಮ, ಜನಾರ್ದನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News