×
Ad

ಬಿವಿಟಿಯಲ್ಲಿ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Update: 2019-06-11 20:56 IST

ಮಣಿಪಾಲ ಜೂ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದಲ್ಲಿ ಜೂ. 24ರಿಂದ ನಾಲ್ಕು ವಾರಗಳ ಕಾಲ ಉಚಿತ ಹೊಲಿಗೆ ತರಬೇತಿಯನ್ನು ಆಸಕ್ತ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದೆ. ಎಸೆಸೆಲ್ಸಿ, ಪಿಯುಸಿ ಹಾಗೂ ಡಿಗ್ರಿ ಮುಗಿಸಿ ಉದ್ಯೋಗವಿಲ್ಲದೇ ಮನೆಯಲ್ಲಿರುವವರಿಗೆ ತರಬೇತಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ, ಉಪಹಾರ ನೀಡಲಾಗುವುದು

ಅಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಜೂ.19ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ‘ಅನಂತ’ ಪೆರಂಪಳ್ಳಿ, ಅಂಬಾಗಿಲು ರಸ್ತೆ ಕುಂಜಿಬೆಟ್ಟು ಅಂಚೆ, ಉಡುಪಿ-576102.ದೂರವಾಣಿ:0820-2570263 ಇಲ್ಲಿಗೆ ತಲುಪುವಂತೆ ಕಳುಹಿಸಬಹುದು. ಈ ಹಿಂದೆ ತರಬೇತಿಗಾಗಿ ಅರ್ಜಿ ಸಲ್ಲಿಸಿ ತರಬೇತಿ ಪಡೆದು ಕೊಳ್ಳಲು ಅವಕಾಶ ಸಿಗದವರು ಕೂಡಾ ಇನ್ನೊಮ್ಮೆ ಅರ್ಜಿ ಸಲ್ಲಿಸಬಹುದು ಎಂದು ಬಿವಿಟಿ ಪತ್ರಿಕಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News