×
Ad

ಜೂ.30ರವರೆಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್

Update: 2019-06-11 21:59 IST

ಮಂಗಳೂರು, ಜೂ.11: ಪ್ರಸಕ್ತ 2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸ್‌ಗಳನ್ನು ತೋರಿಸಿ ಜೂ.30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಮಾಧ್ಯಮಿಕ ತರಗತಿಯಿಂದ ಪೌಢಶಾಲೆಗೆ ಅಥವಾ ಪೌಢಶಾಲೆಯಿಂದ ಪದವಿಪೂರ್ವ ಕಾಲೇಜಿಗೆ ಸೇರುವ ಸಂಧರ್ಭದಲ್ಲಿ ಅಥವಾ ಶಾಲೆ/ಕಾಲೇಜು ಬದಲಿಸಿದ್ದ ಸಂದರ್ಭದಲ್ಲಿ ಹಾಗೂ ಮಾರ್ಗ ಬದಲಾವಣೆಯಾಗಿದೆ. ಹಲವಾರು ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ವಿದ್ಯಾರ್ಥಿ ಪಾಸ್ ಪಡೆದಿರುವುದಿಲ್ಲ. ಆದರೆ ಈಗ ಶಾಲಾ/ಕಾಲೇಜು ಬದಲಾವಣೆಯಿಂದ ಪಾಸ್ ಅವಶ್ಯಕತೆಯಿರುತ್ತದೆ. ಇಂತಹ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಜೂ.30 ರವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News