ಕಡಲ್ಕೊರೆತದ ಸಂತ್ರಸ್ತರಿಗೆ 3 ದಿನಗಳೊಳಗೆ ಪರಿಹಾರ: ಸಚಿವ ಖಾದರ್

Update: 2019-06-11 16:57 GMT

ಮಂಗಳೂರು, ಜೂ.11: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ಉಳ್ಳಾಲ, ಸೋಮೇಶ್ವರ ಸೇರಿದಂತೆ ವಿವಿಧೆಡೆ ಸಂಭವಿಸಿದ ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ವರದಿ ಕಳುಹಿಸಲಾಗಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

 ಉಳ್ಳಾಲದಲ್ಲಿ ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ‘ವಾರ್ತಾ ಭಾರತಿ’ಗೆ ಪ್ರತಿಕ್ರಿಯಿಸಿದ ಸಚಿವರು, ಕಡಲ್ಕೊರೆತ ಉಂಟಾಗುವ ಪ್ರದೇಶಗಳಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಸಂರಕ್ಷಣಾ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆಯೂ ನಿರ್ದೇಶಿಸಿದ್ದಾರೆ. ಕಡಲ್ಕೊರೆತದಿಂದ ಸಂಕಷ್ಟಕ್ಕೊಳಗಾಗುವ ಸ್ಥಳೀಯರಿಗೆ ಆಶ್ರಯ ಕೇಂದ್ರಗಳನ್ನು ತೆರೆಯಲು ರಾಜ್ಯ ಸರಕಾರ ಆದೇಶಿಸಿದೆ ಎಂದು ಸಚಿವರು ವಿವರಿಸಿದರು.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದೆ. ಇದರಿಂದ ಚಂಡಮಾರುತ ಬೀಸುತ್ತಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 10-15 ದಿನಗಳ ಕಾಲ ಕಡಲ್ಕೊರೆತ ಪ್ರದೇಶ ಹಾಗೂ ಜಿಲ್ಲೆಯ ನದಿ ಸಮೀಪದಲ್ಲಿ ಜನರು ಎಚ್ಚರಿಕೆ ಹಾಗೂ ಜಾಗೃತರಾಗಿರಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಮೂರು ದಿನಗಳೊಳಗೆ ಪರಿಹಾರ:

ಚಂಡಮಾರುತದಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಕಡಲ್ಕೊರೆತ, ಆಸ್ತಿ-ಪಾಸ್ತಿ ಸಂಭವಿಸಿದವರಿಗೆ ಮೂರು ದಿನಗಳೊಳಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News