ಜಲಾಮೃತ ಯೋಜನೆಯಡಿ 20 ಸಾವಿರ ಚೆಕ್‌ಡ್ಯಾಮ್ ನಿರ್ಮಾಣ: ಸಚಿವ ಕೃಷ್ಣಭೈರೇಗೌಡ

Update: 2019-06-11 17:32 GMT

ಬೆಂಗಳೂರು, ಜೂ.11: ಜಲಾಮೃತ ಯೋಜನೆಯಡಿ 20 ಸಾವಿರ ಚೆಕ್ ಡ್ಯಾಮ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಇವುಗಳ ಕಾಮಗಾರಿ ಮುಂದಿನ ಮಾರ್ಚ್ 30ಕ್ಕೆ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಆಯೋಜಿಸಿದ್ದ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಮಳೆಯ ಹನಿ ನೀರನ್ನು ಸಂಗ್ರಹಿಸಿಕೊಳ್ಳುವ ಕಡೆಗೆ ಜನತೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ತಿಳಿಸಿದರು.

ರಾಜ್ಯದಲ್ಲಿರುವ ಕೆರೆ, ಕುಂಟೆ ಹಾಗೂ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಬೇಕು. ಮಳೆ ನೀರನ್ನು ಕೆರೆ, ಕಲ್ಯಾಣಿಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ನೀರಿನ ವಿಷಯದಲ್ಲಿ ಸ್ವಾವಲಂಬನೆಯಾಗುವ ನಿಟ್ಟಿನಲ್ಲಿ ಮಳೆ ನೀರಿನ ಸದ್ಬಳಕೆ ಅತ್ಯುತ್ತಮ ಮಾರ್ಗವಾಗಿದೆ ಎಂದು ಅವರು ಹೇಳಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು, ಶಾಸಕ ಟಿ.ವೆಂಕಟರಮಣಯ್ಯ, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನಿ ಕಾರ್ಯದರ್ಶಿ ಎಲ್.ಕೆ.ಅತಿಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಮ್ಮಾ ಮತ್ತಿತರರಿದ್ದರು.

ಒಂದೇ ದಿನ 30 ಲಕ್ಷ ಸಸಿ

ಇವತ್ತು ಒಂದೇ ದಿನದಲ್ಲಿ ರಾಜ್ಯಾದ್ಯಂತ 30ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. ರಾಜ್ಯದಲ್ಲಿ ಈ ವರ್ಷ ಒಟ್ಟು 2ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಈ ಸಸಿಗಳನ್ನು ಜೋಪಾನವಾಗಿ ಸಂರಕ್ಷಿಸುವತ್ತ ಎಲ್ಲರೂ ಗಮನ ವಹಿಸಬೇಕು.

-ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News