ಪರಿಷತ್ ಸದಸ್ಯರಿಗೆ ವಸತಿ ಗೃಹದಲ್ಲಿ ಕಚೇರಿ ಹಂಚಿಕೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-06-11 17:50 GMT

ಬೆಂಗಳೂರು, ಜೂ.11: ಬೀದರ್ ನಗರದ ಜನವಾಡಿ ಪ್ರದೇಶದಲ್ಲಿ ವಿಧಾನ ಪರಿಷತ್ ಅರವಿಂದಕುಮಾರ ಅರಳಿಯವರಿಗೆ ಸರಕಾರಿ ಅಧಿಕಾರಿಗಳಿಗೆ ಮೀಸಲಿಡಲಾದ ವಸತಿ ಗೃಹದಲ್ಲಿ ಕಚೇರಿ ಹಂಚಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಭಾರತ್ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಶಿವರಣಪ್ಪ ವಾಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅಧಿಕಾರಿಗಳ ವಸತಿ ಗೃಹದಲ್ಲಿ ಕಚೇರಿ ಹಂಚಿಕೆ ಮಾಡಿ ಡಿಸಿ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕು. ಅಲ್ಲದೆ, ವಸತಿ ಗೃಹ ಪ್ರದೇಶವನ್ನು ಕಚೇರಿ ಉದ್ದೇಶಕ್ಕಾಗಿ ಹಂಚಿಕೆ ಮಾಡದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು. ಅರ್ಜಿ ವಿಚಾರಣೆ ಪೂರ್ಣಗೊಳ್ಳುವವರೆಗೆ ಡಿಸಿ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News