ಗುಂಡ್ಲುಪೇಟೆಯಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಅಮಾನವೀಯ: ಸಿಎಂ ಕುಮಾರಸ್ವಾಮಿ

Update: 2019-06-12 05:36 GMT

ಬೆಂಗಳೂರು, ಜೂ.12: ಗುಂಡ್ಲುಪೇಟೆಯಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಅಮಾನವೀಯ ಎಂದು  ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು  ಟ್ವೀಟ್ ಮಾಡಿದ್ದಾರೆ

ಜೂನ್ 3ರಂದು. ಗುಂಡ್ಲುಪೇಟೆಯ ಶ್ಯಾನಾಡ್ರಹಳ್ಳಿಯ ಪ್ರತಾಪ್ ಎಂಬವರ ಮೇಲೆ  ಹಲ್ಲೆ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News