ಐಎಂಎ ವಂಚನೆ ಪ್ರಕರಣ: ಬಿ.ಆರ್.ರವಿಕಾಂತೇಗೌಡ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ

Update: 2019-06-12 13:11 GMT
ಬಿ.ಆರ್.ರವಿಕಾಂತೇಗೌಡ

ಬೆಂಗಳೂರು, ಜೂ.12: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಭರಣ ಮಳಿಗೆ ಐಎಂಎ ಸಮೂಹ ಸಂಸ್ಥೆಗಳ ಬಹುಕೋಟಿ ವಂಚನೆ ಆರೋಪ ಪ್ರಕರಣ ಸಂಬಂಧ ರಾಜ್ಯ ಸರಕಾರವು ಬುಧವಾರ ಡಿಐಜಿ ಬಿ.ಆರ್.ರವಿಕಾಂತೇಗೌಡ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಿ, ಆದೇಶ ಹೊರಡಿಸಿದೆ.

ಪ್ರಸ್ತುತ ಅಗ್ನಿಶಾಮಕ ದಳದ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿರುವ ಬಿ.ಆರ್.ರವಿಕಾಂತೇಗೌಡ, ಅಪರಾಧ ವಿಭಾಗದ ಡಿಸಿಪಿ ಎಸ್.ಗಿರೀಶ್, ಬೆಂಗಳೂರು ಸಿಟಿ ಸಿಸಿಬಿ ವಿಭಾಗ ಎಸಿಪಿ ಬಾಲರಾಜು, ಬೆಂಗಳೂರು ಸಿಐಡಿ ವಿಭಾಗದ ಡಿವೈಎಸ್ಪಿ ಕೆ.ರವಿಶಂಕರ್, ರಾಜ್ಯ ಗುಪ್ತಚರ ದಳದ ಡಿವೈಎಸ್ಪಿ ರಾಜಾ ಇಮಾಮ್ ಖಾಸಿಮ್.

ಕರ್ನಾಟಕ ಲೋಕಾಯುಕ್ತ ವಿಭಾಗದ ಡಿವೈಎಸ್ಪಿ ಅಬ್ದುಲ್ ಖಾದರ್, ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಆರ್.ಗೀತಾ, ಬೆಂಗಳೂರು ಬಿಡಿಎ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಎಲ್.ವೈ.ರಾಜೇಶ್, ಸಿಸಿಬಿ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್ ಅಂಜನ್ ಕುಮಾರ್, ಎಸ್ಸಿಆರ್‌ಬಿಯ ಇನ್‌ಸ್ಪೆಕ್ಟರ್ ಎನ್.ತನ್ವೀರ್ ಅಹ್ಮದ್ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಕೆ.ಶೇಖರ್ ಸಿಟ್ ತನಿಖಾ ತಂಡದಲ್ಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News