ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Update: 2019-06-12 16:38 GMT

ಬೆಂಗಳೂರು, ಜೂ. 12: ‘ಚಾಮರಾಜನಗರದ ಗುಂಡ್ಲಪೇಟೆ ತಾಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

‘ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಜನರಿಗೆ ಸಲಹೆ ಮಾಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದಲಿತ ಸಮುದಾಯದ ಪ್ರತಾಪ್ ಎಂಬುವರ ಮೇಲೆ ದೇವರ ವಿಗ್ರಹಕ್ಕೆ ಹಾನಿ ಮಾಡಿದ್ದಾನೆಂಬ ಕಾರಣಕ್ಕೆ ಗುಂಪು ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ದೇವಳದ ಅರ್ಚಕ ಶಿವಪ್ಪ, ಪುಟ್ಟಸ್ವಾಮಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News