ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ: ಐವರ ಬಂಧನ

Update: 2019-06-12 16:40 GMT

ಚಾಮರಾಜನಗರ, ಜೂ.12: ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ಕೈಗೊಂಡಿರುವ ಜಿಲ್ಲಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ 5 ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಬಸವರಾಜು, ಮಾಣಿಕ್ಯ, ಸತೀಶ, ಚನ್ನಕೇಶವಮೂರ್ತಿ ಮತ್ತು ಪುಟ್ಟಸ್ವಾಮಿರವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News