ಸಿಎಫ್‌ಐ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆ ಪೊಲೀಸ್ ಪೇದೆ ಅಮಾನತು

Update: 2019-06-12 15:20 GMT

ಮಂಗಳೂರು/ಬೆಳ್ತಂಗಡಿ, ಜೂ.12: ಬೆಳ್ತಂಗಡಿಯಲ್ಲಿ ಸಿಎಫ್‌ಐ ಸಂಘಟನೆ ನಡೆಸಿದ ಪ್ರತಿಭಟನೆಯ ಸಂದರ್ಭ ಸಂಘಟನೆಯ ಕಾರ್ಯರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಎಸ್ಪಿಯವರು ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪೇದೆ ಆನಂದ್ ಅಮಾನತುಗೊಂಡವರು.

ಸಿಎಫ್‌ಐ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸ್ ಪೇದೆಯು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿತ್ತು. ದೂರನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಬಳಿಕ ಎಸ್ಪಿಯವರು ಪೊಲೀಸ್ ಪೇದೆ ಆನಂದ್ ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಾರ್ತಾಭಾರತಿ’ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ‘ಬೆಳ್ತಂಗಡಿಯಲ್ಲಿ ಸಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸ್ ಪೇದೆ ಹಲ್ಲೆ ನಡೆಸಿದ್ದರು ಎನ್ನುವ ಆರೋಪದಲ್ಲಿ ಆನಂದ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News